ಮಂಗಳೂರು ವಿಶ್ವವಿದ್ಯಾನಿಲಯ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ “ಅಂಬಿಗರ ಚೌಡಯ್ಯನ ವಚನಗಳ ಗಾಯನ ಮತ್ತು ವ್ಯಾಖ್ಯಾನ” ಕಾರ್ಯಕ್ರಮವನ್ನು ದಿನಂಕ 4.9.2017 ರಂದು ಆಯೋಜಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿಗಳಾದ ಶ್ರೀ ಶಿವರಾಜು ಹಾಗೂ ಕುಮಾರಿ ಶ್ರೀ ದೇವಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕರಾದ ಡಾ.ನಾಗಪ್ಪ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಮುರಳೀಧರ ರಾವ್ ಅಧ್ಯಕ್ಷತೆಯನ್ನು ವಹಿಸಿದ್ದರು.