ಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತ,ಕನ್ನಡ ಸಾಹಿತ್ಯ ಪರಿಷತ್ತ,ಮಂಗಳೂರು ತಾಲೂಕು ಹಾಗೂ ಗೋವಿಂದ ದಾಸ ಕಾಲೇಜು ಕನ್ನಡ ವಿಭಾಗದ ಸಹಯೋಗದೊಂದಿಗೆ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ೨೩/೧/೨೦೧೮ ರಂದು ನಡೆಯಿತು.ಪ್ರೊ.ರಾಮಚಂದ್ರ ಕೆದಿಲಾಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಿಂದೂ ವಿದ್ಯದಾಯಿನಿ ಸಂಘದ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಸಮ್ಮೇಳನದ ಅಧ್ಯಕ್ಷರನ್ನು ಭವ್ಯ ಮೆರವಣಿಗೆಯಲ್ಲಿ ವೇದಿಕೆಗೆ ಕರೆತಂದರು.ವಿವಿಧ ಕಾಲೇಜು ಹಾಗೂ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನೀಡಿದರು.ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ, ಹಿಂದೂ ವಿದ್ಯದಾಯಿನಿ ಸಂಘದ ಅಧ್ಯಕ್ಷರಾದ ಶ್ರೀ ಇ.ಜನಾರ್ದನ್,ಕಾರ್ಯದರ್ಶಿ ಶ್ರೀ ವೆಂಕಟ್ರಾವ್,ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಮುರಳೀಧರ್ ರಾವ, ಸಮ್ಮೇಳನದ ಸಂಚಾಲಕರಾದ ಪ್ರೊ.ಕೃಷ್ಣಮೂರ್ತಿ ಹಾಗೂ ಪ್ರೊ.ರಮೇಶ ಭಟ್.ಎಸ್.ಜಿ ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ನಡೆದ ಸ್ವ-ರಚಿತ ವಿದ್ಯಾರ್ಥಿ ಕವಿಗೋಷ್ಠಿಯಲ್ಲಿ ಕರಾವಳಿ ಲೇಖಕಿ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಶಿಲೇಖ ಅಧ್ಯಕ್ಷತೆ ವಹಿಸಿದ್ದರು.. ಕನ್ನಡ ಪರ ಸಾಹಿತ್ಯ-ಸಂಸ್ಕ್ರತಿ ಚಿಂತನೆ ಕುರಿತು ಪ್ರಬಂಧ ಮಂಡನೆ ನಡೆಯಿತು. ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಸಮ್ಮೇಳನದ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.