“ಯುವಕರಲ್ಲಿ ಸೇವಾ ಮನೋಭಾವ,ಸಾಮಾಜಿ ಕ, ಜವಾಬ್ದಾರಿ ಮಾನವೀಯ ಗುಣಗಳನ್ನು ಬೆಳೆಸುವುದರೊಂದಿಗೆ, ಸ್ವಯಂ ಪ್ರೇರಿತರಾಗಿ ಸಮಾಜಕ್ಕೆ ಸೇವೆ ನೀಡುವ ಉದ್ದೇಶದಿಂದ ಸ್ಥಾಪಿತವಾದದ್ದು ಯುವ ರೆಡ್ ಕ್ರಾಸ್ “ ಎಂದು ಮಂಗಳೂರಿನ ನಿವೃತ ಆರೋಗ್ಯ ಪರಿವೀಕ್ಷಕರಾದ ಶ್ರೀ ಜಯರಾಮ ಪೂಜಾರಿ ನುಡಿದರು. ಅವರು ಹಿಂದೂ ವಿದ್ಯಾದಾಯಿನಿ ಸಂಘದ ಆಡಳಿತಕ್ಕೆ ಒಳಪಟ್ಟ ಗೋವಿಂದ ದಾಸ ಕಾಲೇಜಿನ ಶೈಕ್ಷಣಿಕ ವರ್ಷ ದ ಯುವ ರೆಡ್ ಕ್ರಾಸ್ ಘಟಕದ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ, ಯುವಜನತೆಯಲ್ಲಿ ಆರೋಗ್ಯ ಎನ್ನುವ ವಿಷಯದ ಕುರಿತು ಮಾಹಿತಿ ನೀಡುತ್ತಾ ಮಾತನಾಡಿದರು.ಪ್ರತಿಯೊಂದು ರಾಷ್ಟ್ರದ ಭರವಸೆ ಅದರ ಯುವಜನತೆ,ಆದ್ದರಿಂದ ಆರೋಗ್ಯವಂತ ಭಾರತಕ್ಕೆ ಆರೋಗ್ಯವಂತ ಯುವಕರು ಬೇಕಾಗಿದೆ.ಹಾಗಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಪ್ರತಿಯೊಬ್ಬರೂ ಕಾಪಾಡಿಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಹರೀಶ್ ಪಿ,ವಹಿಸಿ ಸಮಾಜದಲ್ಲಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವುದರೊಂದಿಗೆ ವಿಪತ್ತು ನಿರ್ವಹಣೆ ಮತ್ತು ಆರೋಗ್ಯ ಸಂಬಂಧಿ ಸೇವೆಗಳನ್ನು ಉತ್ತೇಜಿಸುವಲ್ಲಿ ಯೂತ್ ರೆಡ್ ಕ್ರಾಸ್ ಪ್ರಮುಖ ಪಾತ್ರ ವಹಿಸುತ್ತದೆ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪ್ರವೃತರಾಗುವಂತೆ ಕರೆ ನೀಡಿದರು.
ಕಾರ್ಯಕ್ರಮವು 25/09/2025 ರಂದು ಆಡಿಯೋ ವಿಷುಯಲ್ ಹಾಲ್‌ನಲ್ಲಿ ನಡೆಯಿತು.ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಪೂರ್ಣಿಮಾ ಗೋಖಲೆ ಸ್ವಾಗತಿಸಿ, ಸಹ ಕಾರ್ಯಕ್ರಮಾಧಿಕಾರಿ ಕಿಟ್ಟು ರಾಮಕುಂಜ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಘಟಕ ನಾಯಕಿ ಅಂಜಲಿ ವಂದಿಸಿ,ವಿದ್ಯಾರ್ಥಿ ಧನುಷ್ ಕಾರ್ಯಕ್ರಮದಲ್ಲಿ ನಿರೂಪಿಸಿದರು.ಕಾರ್ಯಕ್ರಮದಲ್ಲಿ 89 ಸ್ವಯಂಸೇವಕರು ಭಾಗವಹಿಸಿದ್ದರು.


